ಇಂದು ಕಡಲ ತೀರ ಸ್ವಚ್ಚತಾ ಅಭಿಯಾನ

Spread the love

ಇಂದು ಕಡಲ ತೀರ ಸ್ವಚ್ಚತಾ ಅಭಿಯಾನ

ಮಂಗಳೂರು,ಸೆ.16(ಕ.ವಾ):- ಜಿಲ್ಲಾಡಳಿತ, ಕೇಂದ್ರ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸಂಯುಕ್ತಾಶ್ರಯದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವವನ್ನು ಸೆ.17ರ ಶನಿವಾರ ಬೆಳಿಗ್ಗೆ 7 ಗಂಟೆಗೆ ನಗರದ ಪಣಂಬೂರು ಕಡಲ ತೀರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು, ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆಯ ಸಂಸದರಾದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್,  ಡಿ. ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ ಯು., ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಮೀನುಗಾರಿಕೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಅರೆಭಾμÉ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಪದ್ಮಶ್ರೀ ಪುರಸ್ಕøತ ಹರೆಕಳ ಹಾಜಬ್ಬ ಭಾಗವಹಿಸುವರು.

ಇಂದಿನಿಂದ ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು,ಸೆ.16(ಕ.ವಾ):- ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ಸೆ.17ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಸೆ.17ರ ಸೋಮವಾರ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ, 20ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಸೆ.21ರ ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ವಿಶ್ವಕರ್ಮ ಜಯಂತಿ

ಮಂಗಳೂರು,ಸೆ.16(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಂಯುಕ್ತಾಶ್ರಯದಲ್ಲಿ ಸೆ.17ರ ಶನಿವಾರ ಮಧ್ಯಾಹ್ನ 3 ಗಂಟೆಗೆ ನಗರದ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆಯ ಸಂಸದರಾದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ ಯು., ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಮೀನುಗಾರಿಕೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಅರೆಭಾμÉ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರ ಕೆ. ಕೇಶವಾಚಾರ್ಯ ಭಾಗವಹಿಸುವರು.

ಬೇಲೂರಿನ ವೇದ ಹಾಗೂ ಸಂಸ್ಕøತ ಶಿಕ್ಷಕ ವಿಶ್ವನಾಥ ಶರ್ಮ ವಿಶ್ವಕರ್ಮ ಜಯಂತಿಯ ಸಂದೇಶ ನೀಡುವರು.

ಮುರಾದಲ್ಲಿಂದು ಅಪರ ಜಿಲ್ಲಾಧಿಕಾರಿಯವರಿಂದ ಗ್ರಾಮ ವಾಸ್ತವ್ಯ

ಮಂಗಳೂರು,ಸೆ.16(ಕ.ವಾ):- ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರಾ ಎಂಬಲ್ಲಿರುವ  ಗೌಡ ಸಮುದಾಯ ಭವನದಲ್ಲಿ ಸೆಪ್ಟಂಬರ್ ತಿಂಗಳ ಮೂರನೇ ಶನಿವಾರವಾದ 17ರಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಜೆಯಲ್ಲಿರುವ ಕಾರಣ ಅಪರ ಜಿಲ್ಲಾಧಿಕಾರಿಯವರು ಈ ಬಾರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಅರ್ಜಿ ಆಹ್ವಾನ

ಮಂಗಳೂರು,ಸೆ.16(ಕ.ವಾ):- ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ನಿಗಮಗಳಿಂದ ವಿವಿಧ ಯೋಜನೆಗಳ ಪ್ರಯೋಜನಕ್ಕೆ ಸೆ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ವಿವರ:
ಸ್ವಯಂ ಉದ್ಯೋಗ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಕೌಶಲ್ಯಾಭಿವೃದ್ಧಿ ತರಬೇತಿ, ವಸತಿ ಕಾರ್ಯಾಗಾರ  ನಿರ್ಮಾಣ ಯೋಜನೆ.

ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಲಭ್ಯವಿದ್ದು, ‘ಗ್ರಾಮಒನ್’ ಅಥವಾ ‘ಮಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿಯನ್ನು ವೆಬ್‍ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/   ಮೂಲಕ ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್‍ಸೈಟ್, ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400 ಸಂಪರ್ಕಿಸಿ ಪಡೆಯಬಹುದು. ಈಗಾಗಲೇ ಸುವಿಧಾ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಜಿ.ಎಚ್.ಎಸ್ ರೋಡ್ ಮಂಗಳೂರು. ದೂರವಾಣಿ ಸಂಖ್ಯೆ: 0824-2951814 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಂಗಳೂರು,ಸೆ.16(ಕ.ವಾ):- ಸಿ.ಇ.ಟಿ ಮೂಲಕ ಆಯ್ಕೆಯಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿ ಸಾಲ ಯೋಜನೆ ಹಾಗೂ ಅರಿವು ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿ ರಹಿತ ಸಾಲ ಯೋಜನೆಗೆ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಗರದ ಉರ್ವಾಸ್ಟೋರ್ ಬಳಿಯಿರುವ ದೇವರಾಜ ಅರಸು ಭವನ ಅಥವಾ ದೂ.ಸಂ:0824-2456544 ಅನ್ನು ಸಂಪರ್ಕಿಸುವಂತೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಂಗಳೂರು,ಸೆ.16(ಕ.ವಾ):- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಅಕ್ಟೋಬರ್ 20ರೊಳಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ hಣಣಠಿs://ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ  ವೆಬ್‍ಸೈಟ್ ಅಥವಾ ನಿಗಮದ ದೂ.ಸಂ:080-22374832, 9606066389 ಹಾಗೂ 8824300400 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

19ರಿಂದ ಅಹವಾಲು ಸ್ವೀಕಾರ

ಮಂಗಳೂರು,ಸೆ.16(ಕ.ವಾ):- ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸೆ.19ರ ಸೋಮವಾರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿ, ಸೆ.20ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮೂಲ್ಕಿ ತಾಲೂಕಿನ ನಗರ ಪಂಚಾಯತ್ ಸಮುದಾಯ ಭವನ ಹಾಗೂ ಸೆ.21ರ ಬುಧವಾರ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಬೆಳ್ತಂಗಡಿ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧದ ದೂರುಗಳನ್ನು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9886542369. ಪೊಲೀಸ್ ಉಪಾಧಿಕ್ಷಕರ ಕಚೇರಿ-1:0824-2453420, 9448635348. ಪೊಲೀಸ್ ಉಪಾಧೀಕ್ಷಕರ ಕಚೇರಿ-2:0824-2453420. ಪೊಲೀಸ್ ನಿರೀಕ್ಷಕರ ಕಚೇರಿ:0824-2427237 ಈ ದೂ.ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here