ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

Spread the love

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಚುನಾವಣಾ ಆಯೋಗವು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆಯಿತು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ.

ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್​ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್​ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ.


Spread the love