ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

Spread the love

ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

ಮಡಿಕೇರಿ: ಕೊಡಗಿನ ಕುಲದೇವತೆ, ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅ.17ರಂದು ಸೋಮವಾರ ಸಂಜೆ 7.21ಕ್ಕೆತೀರ್ಥೋದ್ಭವವಾಗಲಿದೆ.

ಈ ಸಂಬAಧ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಭಾನುವಾರ ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿ ಭಾಗಮಂಡಲದಲ್ಲಿ ಮುಡಿಶೆಡ್, ತ್ರಿವೇಣಿ ಸಂಗಮ ಬಳಿ ಪಿಂಡ ಪ್ರದಾನ ವ್ಯವಸ್ಥೆ, ಶೌಚಾಲಯ, ಸಚ್ಛತೆಯ ಕ್ರಮಗಳನ್ನು ಪರಿಶೀಲಿಸಿದರು.

ಬಳಿಕ ತಲಕಾವೇರಿಗೆ ತೆರಳುವ ಮಾರ್ಗ ಭಾಗಮಂಡಲದಿAದ ತಲಕಾವೇರಿ ವರೆಗೆ ವಿದ್ಯುತ್ ದೀಪ, ತಲಕಾವೇರಿಯಲ್ಲಿ ಪೋಕಸ್ ಬೆಳಕು ವ್ಯವಸ್ಥೆ, ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಪೂಜಾ ಕಾರ್ಯದ ಸಿದ್ಧತೆ ಮತ್ತಿತರವನ್ನು ಪರಿಶೀಲಿಸಿ, ವಾಹನಗಳ ನಿಲುಗಡೆಗೆ ವ್ಯವಸ್ಥೆ, ಬ್ಯಾರಿಕೇಡ್‌ಗಳ ನಿರ್ಮಾಣ, ಭಕ್ತಾಧಿಗಳಿಗೆ ಅನ್ನ ಸಂತರ್ಪನೆ ಹೀಗೆ ಹಲವು ಸಿದ್ಧತೆಯನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸೋಮವಾರ ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು. ಪವಿತ್ರ ತೀರ್ಥೋದ್ಭವ ಸಂಬAಧ ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಎರಡು ಬಾರಿ ಸಭೆ ನಡೆದಿದೆ. ಈ ಬಾರಿ ಕೋವಿಡ್ ಇಲ್ಲದ ಕಾರಣ ಭಕ್ತಾಧಿಗಳಿಗೆ ಯಾವುದೇ ರೀತಿಯ ಕಿರಿಕಿರಿ ಉಂಟಾಗದAತೆ ಗಮನಹರಿಸಲಾಗಿದೆ. ಭಕ್ತಾಧಿಗಳು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡಬಾರದು. ಶ್ರದ್ದಾಭಕ್ತಿಯಿಂದ ತಾಯಿ ಶ್ರೀ ಕಾವೇರಿ ಮಾತೆಯಲ್ಲಿ ಪ್ರಾರ್ಥೀಸಬೇಕು. ಭಕ್ತಿ ಮತ್ತು ಪ್ರೀತಿಯಿಂದ ತೀರ್ಥೋದ್ಭವಕ್ಕೆ ಸಹಕರಿಸಬೇಕು ಎಂದು ಅವರು ಕೋರಿದರು.

ಪವಿತ್ರ ತೀರ್ಥೋದ್ಭವ ಸಂಬAಧ ಅಗತ್ಯ ಬಸ್ ಕಲ್ಪಿಸಲಾಗಿದೆ. ಹಿಂದಿನAತೆ ಪವಿತ್ರ ತೀರ್ಥೋದ್ಭವ ನಂತರ ಕೊಳದಲ್ಲಿ ಭಕ್ತಾಧಿಗಳಿಗೆ ಪವಿತ್ರ ಸ್ನಾನಕ್ಕೆ ಅವಕಾಶ ಇದೆ. ಭಕ್ತಾಧಿಗಳು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡಬಾರದು.ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಆದಿ ಚುಂಚನಗಿರಿ ಮಠದ ಮೈಸೂರು ಶಾಖೆಯ ಸ್ವಾಮೀಜಿ ಇತರರು ತೀರ್ಥೋದ್ಭವ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ತೀರ್ಥೋದ್ಭವ ದಿನವಾದ ಸೋಮವಾರ ಸಂಜೆ 5 ಗಂಟೆಯಿAದಲೇ ಪೂಜಾ ಕಾರ್ಯಗಳು ಆರಂಭವಾಗಲಿದೆ ಎಂದು ಪ್ರಮುಖ ಅರ್ಚಕರಾದ ಗುರುರಾಜ್ ಆಚಾರ್ಯ ಅವರು ಮಾಹಿತಿ ನೀಡಿದರು. 9 ಮಂದಿ ಅರ್ಚಕರು ಪವಿತ್ರ ತೀರ್ಥೋದ್ಭವದಲ್ಲಿ ಪೂಜಾ ವಿಧಿವಿಧಾನಗಳನ್ನು ನಡೆಸಲಿದ್ದಾರೆ ಎಂದರು.

ಕುಂಕುಮಾರ್ಚನೆ, ಅಭಿಷೇಕ ಹಾಗೂ ಮಹಾಪೂಜಾ ಕಾರ್ಯಗಳು ಜರುಗಲಿವೆ. ನಾಡಿಗೆ ಒಳಿತಾಗುವಲ್ಲಿ ತಾಯಿ ಶ್ರೀ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಅರ್ಚಕರು ತಿಳಿಸಿದರು.

ಶ್ರೀ ಕಾವೇರಿ ಮಾತೆ, ಹಾಗೆಯೇ ಮಹಾಗಣಪತಿ, ಅಗಸ್ತೇಶ್ವರ ದೇವಾಲಯ ಸೇರಿದಂತೆ ಎಲ್ಲಡೆ ಹೂವಿನ ಅಲಂಕಾರ ಮಾಡಲಾಗಿದೆ. ತಾತ್ಕಾಲಿಕ ಕ್ಲಿನಿಕ್, ಶ್ರೀ ಕಾವೇರಿ ಮಾತೆ ಧಾರ್ಮಿಕ ಗೀತಗಾಯನ ಕಾರ್ಯಕ್ರಮ, ತಲಕಾವೇರಿಯಲ್ಲಿ ಶುಚಿತ್ವಕ್ಕೆ ಒತ್ತು ನೀಡುವುದು, ಅಲ್ಲಲ್ಲಿ ಡಸ್ಟ್ಬಿನ್ ಇಡುವುದು, ಹೀಗೆ ಹಲವು ಕಾರ್ಯಗಳು ನಡೆದಿವೆ.

ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುAಡೇಗೌಡ, ಕಾರ್ಯನಿರ್ವಹಣಾಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬAಧ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗಮನಹರಿಸಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ಕೋರಿದರು.

‘ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬAಧ ಪೊಲೀಸ್ ಇಲಾಖೆಯಿಂದ ಮೂವರು ಡಿವೈಎಸ್‌ಪಿಗಳು, 7 ಇನ್ಸ್ಪೆಕ್ಟರ್, 17 ಸಬ್ ಇನ್ಸ್ಪೆಕ್ಟರ್, 300 ಪೊಲೀಸರು, 100 ಮಂದಿ ಮೀಸಲು ಪೊಲೀಸ್ ಸಶಸ್ತç ಪಡೆಯನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.’

ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರ ನೇತೃತ್ವದಲ್ಲಿ ಭಾಗಮಂಡಲದಿAದ ತಲಕಾವೇರಿಗೆ ಚಿನ್ನಾಭರಣವನ್ನು ತೆಗೆದುಕೊಂಡು ಹೋಗಿ ತಾಯಿ ಶ್ರೀ ಕಾವೇರಿ ಮಾತೆಗೆ ಭಾನುವಾರ ತೊಡಿಸಲಾಯಿತು.


Spread the love