ಈದ್ ಮಿಲಾದ್ ಆಚರಣೆ ಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

Spread the love

ಈದ್ ಮಿಲಾದ್ ಆಚರಣೆ ಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಈಗಾಗಲೇ ದಸರಾ ಹಾಗೂ ದೀಪಾವಳಿಯನ್ನು ಸರಳವಾಗಿ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ರಾಜ್ಯ ಸರ್ಕಾರ, ಇದೀಗ ಮುಸ್ಲೀಂ ಸಮುದಾಯದವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು, ಈದ್ ಮಿಲಾದ್ ಆಚರಿಸುವಂತೆ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬದ ವೇಳೆ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ಒಂದು ವೇಳೆ ಈ ನಿಮಯಗಳನ್ನು ಮೀರಿದ್ರೆ.. ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.


Spread the love