ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

Spread the love

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ಭೇಟಿ ನೀಡಿದರು.

ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿ ಪ್ರಸಾದ ವಿಕರಿಸಿದರು.

ಬೆಳ್ಳಂಪಳ್ಳಿ ಯವರು ದೇವಸ್ಥಾನದ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ಎಂಎ ಗಫೂರ್, ಪ್ರಸಾದ್ ಕಾಂಚನ್, ವೆರೋನಿಕಾ ಕರ್ನಾಲಿಯೋ, ಕಿಶನ್ ಹೆಗ್ಡೆ ಕೊಳ್ಕೆ ಬೈಲ್, ವಿಶ್ವಾಸ ಅಮೀನ್ , ಅಬ್ದುಲ್ ಅಜೀಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.


Spread the love