Home Mangalorean News Kannada News ಉಡುಪಿ|ಆನ್ ಲೈನ್ ಟ್ರೇಡಿಂಗ್ ಮೋಸ: ಸೆನ್ ಪೊಲೀಸರಿಂದ ನಾಲ್ವರ ಬಂಧನ

ಉಡುಪಿ|ಆನ್ ಲೈನ್ ಟ್ರೇಡಿಂಗ್ ಮೋಸ: ಸೆನ್ ಪೊಲೀಸರಿಂದ ನಾಲ್ವರ ಬಂಧನ

Spread the love

ಉಡುಪಿ|ಆನ್ ಲೈನ್ ಟ್ರೇಡಿಂಗ್ ಮೋಸ: ಸೆನ್ ಪೊಲೀಸರಿಂದ ನಾಲ್ವರ ಬಂಧನ

ಉಡುಪಿ: ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೊಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20), ಹೆಜಮಾಡಿ ಕನ್ನಂಗಾರ್ ನಿವಾಸಿ ಅಹಮದ್ ಅನ್ವೀಜ್(20), ಬಂಟ್ವಾಳ ನಿವಾಸಿ ಸಪ್ವಾನ್(30), ಮತ್ತು ತಾಸೀರ್ (31) ಎಂದು ಗುರುತಿಸಲಾಗಿದೆ.

ಕಾಪು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್(54), ಎಂಬವರಿಗೆ ಫೇಸ್ ಬುಕ್ ಮೂಲಕ ಆರೋಹಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿದ್ದು 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬ್ರವನ್ನು ನೀಡಿ FXCM Gold Tradingಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಮೆಸೇಜ್ ಮಾಡಿದ್ದು ಅದನ್ನು ನಂಬಿದ ಜೊಸ್ಸಿ ತಮ್ಮ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 75,00,000/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುತ್ತಾರೆ.

ಈ ಬಗ್ಗೆ ಜೊಸ್ಸಿ ರವೀಂದ್ರ ಡಿಕ್ರೂಸ್ ರವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ರವರ ಆದೇಶದಂತೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ನಾಯಕ್ ಮತ್ತು ಸಹಾಯಕ ಪೊಲೀಸ್ ಉಪಾಧೀಕ್ಷಕರಾದ ಡಾ. ಹರ್ಷ ಪ್ರಿಯಂವದ ಐಪಿಎಸ್ ರವರ ನಿರ್ದೇಶನ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಠಾಣಾ ಎ.ಎಸ್.ಐ ಉಮೇಶ್ ಜೋಗಿ, ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ ಶೆಟ್ಟಿಗಾರ್, ವೆಂಕಟೇಶ್, ಧರ್ಮಪ್ಪ, ರಾಘವೇಂದ್ರ, ರಾಜೇಶ್ , ದೀಕ್ಷಿತ್, ರವರನ್ನೊಳಗೊಂಡ ವಿಶೇಷ ತಂಡವು ಆರೋಪಿಗಳನ್ನು ಬಂಧಿಸಿ ಅವರಿಂದ ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ 4,00,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಇತರ ಆರೋಪಿಗಳು ತಲೆಮರೆಸಿ ಕೊಂಡಿದ್ದು ಅವರ ದಸ್ತಗಿರಿಗೆ ಬಾಕಿ ಇರುತ್ತದೆ.


Spread the love

Exit mobile version