ಉಡುಪಿಯಲ್ಲಿ ಅದ್ದೂರಿಯಿಂದ ಜರುಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

Spread the love

ಉಡುಪಿಯಲ್ಲಿ ಅದ್ದೂರಿಯಿಂದ ಜರುಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

ಉಡುಪಿ: ದೇಶದ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ಅಂಗವಾಗಿ ಉಡುಪಿಯಲ್ಲಿ ಅದ್ದೂರಿಯಾಗಿ ಜರುಗಿತು.

ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಪಥ ಸಂಚಲನವನ್ನು ವೀಕ್ಷಿಸಿ ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಇದೇ ಸಂದರ್ಭದಲ್ಲಿ ಇತ್ತೀಚಿನ ಕಾಮನ್ವೆಲ್ತ್ ಗೇಮ್ಸ್‌ನ ವೆಯ್ಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಪಡೆದ ಗುರುರಾಜ್ ಪೂಜಾರಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಉಡುಪಿ ಶಾಸಕ ರಘುಪತಿ ಭಟ್, ನಗರ ಸಭಾಧ್ಯಕ್ಷೆ ಸುಮೀತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮ ರಾಮ್ ಎಮ್, ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love