ಉಡುಪಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಡಿ ಕೆ ಶಿವಕುಮಾರ್ ಪಾದಯಾತ್ರೆ ಮೂಲಕ ಮತಪ್ರಚಾರ

Spread the love

ಉಡುಪಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಡಿ ಕೆ ಶಿವಕುಮಾರ್ ಪಾದಯಾತ್ರೆ ಮೂಲಕ ಮತಪ್ರಚಾರ

ಉಡುಪಿ: ವಿಧಾನಸಭಾ ಚುನಾವಣಾ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಡುಪಿ ನಗರದಲ್ಲಿ ಸೋಮವಾರ ಪಾದಯಾತ್ರೆ ಮೂಲಕ ರೋಡ್ ಶೋ ನಡೆಸಿದರು.

ಉಡುಪಿ ನಗರದ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡ ರೋಡ್ ಶೋ ನಗರದ ಸರ್ವಿಸ್ ಬಸ್ ನಿಲ್ದಾಣ, ತ್ರಿವೇಣಿ ಸರ್ಕಲ್, ಕೆ ಎಮ್ ಮಾರ್ಗ, ಡಯಾನ ಸರ್ಕಲ್, ಹಳೆ ತಾಲೂಕು ಕಚೇರಿ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಸಮಾಪನಗೊಂಡಿತು.

ಪಾದಯಾತ್ರೆಯಲ್ಲಿ ಮಾಜಿ ಸಚಿವ ಹಾಗೂ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ, ಉಡುಪಿ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಎಮ್ ಎ ಗಫೂರ್, ಕಿಶನ್ ಹೆಗ್ಡೆ ಕೊಳಕೆಬೈಲು, ವಿಶ್ವಾಸ್ ಅಮೀನ್, ವೆರೋನಿಕಾ ಕರ್ನೆಲಿಯೋ ಹಾಗೂ ಇತರರು ಉಪಸ್ಥಿತರಿದ್ದರು.


Spread the love