ಉಡುಪಿಯಲ್ಲಿ ಸೌಹಾರ್ದತೆಯ ಸಂದೇಶ ಸಾರಿದ ಸದ್ಭಾವನಾ ನಡಿಗೆ

Spread the love

ಉಡುಪಿಯಲ್ಲಿ ಸೌಹಾರ್ದತೆಯ ಸಂದೇಶ ಸಾರಿದ ಸದ್ಭಾವನಾ ನಡಿಗೆ

ಉಡುಪಿ: ಉಡುಪಿ ಜಿಲ್ಲಾ ಸಹಬಾಳ್ವೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸಬ್ ಕೋ ಸನ್ಮತಿ ದೇ ಭಗವಾನ್ ಘೋಷ್ಯ ವಾಕ್ಯದೊಂದಿಗೆ ಧರ್ಮಗಳ ಮಧ್ಯೆ ಸೌಹಾರ್ದತೆ ಬೆಸೆಯುವ ನಿಟ್ಟಿನಲ್ಲಿ ರವಿವಾರ ಸದ್ಭಾವನಾ ನಡಿಗೆ ಜರುಗಿತು.

ಬನ್ನಂಜೆ ನಾರಾಯಣ ಗುರು ಸಭಾಭವನ ವಠಾರದಲ್ಲಿ ರಾಷ್ಟ್ರಧ್ವಜವನ್ನು ಬನ್ನಂಜೆ ಬಿಲ್ಲವ ಸಂಘ ಉಡುಪಿ ಇದರ ಅಧ್ಯಕ್ಷ ಆನಂದ ಪೂಜಾರಿ ಕಿದಿಯೂರು ಉಡುಪಿ ಜಿಲ್ಲಾ ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಅವರಿಗೆ ಹಸ್ತಾಂತರಿಸುವ ಮೂಲಕ ಸದ್ಭಾವನಾ ನಡಿಗೆಗೆ ಚಾಲನೆ ನೀಡಿದರು.

ಅಲ್ಲಿಂದ ಹೊರಟ ನಡಿಗೆ ಸಿಟಿ ಬಸ್ ನಿಲ್ದಾಣ, ಉಡುಪಿ ಜಾಮೀಯ ಮಸೀದಿ, ಸರ್ವಿಸ್ ಬಸ್ ನಿಲ್ದಾಣ, ಕೆ.ಎಂ.ಮಾರ್ಗ, ಶೋಕಾಮಾತಾ ಇಗರ್ಜಿ, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಗಾಂಧಿ ಉದ್ಯಾನವನದಲ್ಲಿ ಸಮಾಪ್ತಿಗೊಂಡಿತು.

ಈ ವೇಳೆ ಮಾತನಾಡಿದ ಸಹಬಾಳ್ವೆ ಸಂಚಾಲಕ ಫಣಿರಾಜ್ ಗಾಂಧಿ ಮತ್ತು ಅಂಬೇಡ್ಕರ್ ಹಾಗೂ ದಲಿತರು ಮತ್ತು ಮುಸ್ಲಿಮರ ನಡುವೆ ಧ್ವೇಷವನ್ನು ಹರಡುವ ಹುನ್ನಾರ ನಡೆಯುತ್ತಿದೆ. ಗಾಂಧಿ ಯಾವ ವಿಮರ್ಶೆಗೂ ಅತೀತರಲ್ಲ. ಗಾಂಧೀಜಿ ತಪ್ಪು ಮಾಡಿದರೆ ಅವರನ್ನು ವಿಮರ್ಶಿಸುವಂತಹ ಸಾರ್ವಜನಿಕ ವೇದಿಕೆಯನ್ನು ಗಾಂಧೀಜಿಯವರೇ ಕೊಟ್ಟು ಹೋಗಿದ್ದಾರೆ. ಗಾಂಧೀಜಿ- ಅಂಬೇಡ್ಕರ್ ಸಂವಾದವನ್ನು ನಾವು ಮುಂದುವರೆಸ ಬೇಕು ಎಂದರು

ಈ ಸಂದರ್ಭದಲ್ಲಿ ಸಹಬಾಳ್ವೆ ಜಿಲ್ಲಾ ಸಂಚಾಲಕ ಪ್ರಶಾಂತ್ ಜತ್ತನ್ನ, ಸಹಬಾಳ್ವೆ ಕರ್ನಾಟಕ ಸಂಚಾಲಕ ಯಾಸೀನ್ ಮಲ್ಪೆ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಧರ್ಮಗುರು ಫಾ. ವಿಲಿಯಂ ಮಾರ್ಟಿಸ್, ಕೆಥೋಲಿಕ್ ಸಭಾ ಅಧ್ಯಕ್ಷೆ ಮೇರಿ ಡಿಸೋಜ, ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭೆ ಸದಸ್ಯ ರಮೇಶ್ ಕಾಂಚನ್, ದಸಂಸ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.


Spread the love