ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ

Spread the love

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 64 ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.

ಮೈಸೂರು ಕೊಳ್ಳೆಗಾಲ ಜೀವನ ಬುದ್ಧ ವಿಹಾರದ ಸುಗತಪಾಲ ಭಂತೇಜಿ ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಭೋಧಿಸಿ. ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣ ವಚನ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಪದವಿ ಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸಹಾಯ ನೀಡ ಸನ್ಮಾನಿಸಲಾಯಿತು.


Spread the love