
ಉಡುಪಿಯ ಸಮಗ್ರ ಅಭಿವೃದ್ಧಿಗೆ ಬದ್ದ – ಯಶ್ಪಾಲ್ ಸುವರ್ಣ
ಉಡುಪಿ: ಸಾಮಾನ್ಯ ಕಾರ್ಯಕರ್ತನಾಗಿರುವ ನನ್ನನ್ನು ಪಕ್ಷ ಗುರುತಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ ಇದನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ ಇದಕ್ಕಾಗಿ ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಗೆಲ್ಲಿಸುವಂತೆ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಮನವಿ ಮಾಡಿದರು.
ಬ್ರಹ್ಮಾವರ ವ್ಯಾಪ್ತಿಯ ವಿವಿಧೆಡೆ ನಡೆದ ಚುನಾವಣಾ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರದ ನರೇಂದ್ರ ಮೋದಿ ಸರಕಾರಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರಲಿದೆ ಎಂದರು.
ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಳೆದ 5 ವರ್ಷಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ಪಾಲ್ ಸುವರ್ಣ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಆರೂರಿನ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಸ್ಥಳೀಯ ನಾಯಕರಾದ ಮಮತಾ ಶೆಟ್ಟಿ, ತಿಮ್ಮಪ್ಪ ಶೆಟ್ಟಿ, ನಾರಾಯಣ ಶೆಟ್ಟಿ, ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.