ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

ಉಡುಪಿ: ಅಪ್ರಾಪ್ತ ಬಾಲಕಿಗೆ ಜ್ಯೂಸಿನಲ್ಲಿ ಅಮಲು ಮಾತ್ರೆಯನ್ನು ಹಾಕಿ ಕುಡಿಸಿ ಲಾಡ್ಜಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಬೀಸಿನ ಪಾರೆ ನಿವಾಸಿ ದೀಪು@ ಜೇಮ್ಸ್ (38) ಎಂದು ಗುರುತಿಸಲಾಗಿದೆ.

ಮೇ 12ರಂದು ಅಪ್ರಾಪ್ತ ಬಾಲಕಿಗೆ ಜ್ಯೂಸಿನಲ್ಲಿ ಅಮಲು ಮಾತ್ರೆಯಯನ್ನು ಹಾಕಿ ಕುಡಿಸಿ ಮಣಿಪಾಲದ ಒಂದು ಲಾಡ್ಜಿಗ್ಎ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ ಕುರಿತು ಬಾಲಕಿ ಈತನ ವಿರುದ್ದ ಅಗಸ್ಟ್ 23ರಂದು ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದು ಅದರಂತೆ ಆರೋಪಿಯ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ವಿಷಯ ತಿಳಿದ ಆರೋಪಿ ಜೇಮ್ಸ್ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ ಜಿಲ್ಲಾ ಪೊಲೀಸ್ ಅಧಿಕ್ಷಕರು, ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು ಸದರಿ ತಂಡ ಆರೋಪಿಯನ್ನ ಸಪ್ಟೆಂಬರ್ 30ರಂದು ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಮತ್ತು ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರರವರ ಮಾರ್ಗದರ್ಶನದಲ್ಲಿ ಹರಿರಾಮ್ ಶಂಕರ್ ಸಹಾಯಕ ಪೊಲೀಸ್ ಅಧೀಕ್ಷಕರು ಕುಂದಾಪುರ ಮತ್ತು ಸಿಬಂದಿಯವರಾದ ಮೋಹನ್, ಚಂದ್ರಶೇಖರ್, ಪ್ರಿನ್ಸ್ ಮತ್ತು ಕೃಷ್ಣರವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.