ಉಡುಪಿ: ಅರಿವು ಸಾಲ ಸೌಲಭ್ಯ: ಅರ್ಜಿ ಆಹ್ವಾನ

Spread the love

ಉಡುಪಿ: ಅರಿವು ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಆಯುಷ್, ಬಿ.ಆರ್ಕ್, ಬಿ.ಇ, ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ, ಫಾರ್ಮ್ ಸೈನ್ಸ್ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರುರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ : 8277799990 ಅಥವಾ ಉಡುಪಿ ದೂರವಾಣಿ ಸಂಖ್ಯೆ: 0820-2574596, ಕಾರ್ಕಳ ದೂರವಾಣಿ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love