ಉಡುಪಿ ಆರ್‌ ಟಿ ಓ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

Spread the love

ಉಡುಪಿ ಆರ್‌ ಟಿ ಓ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಕಚೇರಿಯ (ಆರ್ಟಿಓ) ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಆರ್ಟಿಓ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ ಫ್ಲ್ಯಾಟ್ನಲ್ಲಿ ಪ್ರಮುಖ ಶೋಧ ಕಾರ್ಯ ನಡೆದಿದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಉಡುಪಿ ತಾಲೂಕಿನ ಪಡುಅಲೆವೂರು ಗ್ರಾಮದಲ್ಲಿರುವ ಅವರ ಸಂಬಂಧಿಕರ ಮನೆಗಳಲ್ಲೂ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.

ಲಕ್ಷ್ಮೀನಾರಾಯಣ ನಾಯಕ್ ಅವರ ಆದಾಯ ಮತ್ತು ಆಸ್ತಿ ನಡುವಿನ ಅಸಮತೋಲನದ ಕುರಿತು ಬಂದ ದೂರು ಹಿನ್ನೆಲೆಯಲ್ಲಿ ಈ ಶೋಧ ಕಾರ್ಯ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love
Subscribe
Notify of

0 Comments
Inline Feedbacks
View all comments