ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ

Spread the love

ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ

ಉಡುಪಿ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಫೆಬ್ರವರಿ 2 ರಿಂದ 5 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.2 ರಂದು ಜಿಲ್ಲೆಗೆ ಆಗಮಿಸಿ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಫೆ.3 ರಂದು 10 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯ ವರೆಗೆ ಮಣಿಪಾಲ್ನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ.

ಸಂಜೆ 5.30 ರಿಂದ 6.30 ರವರೆಗೆ ನಗರದ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜರಗುವ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಮತ್ತು ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಫೆ.4 ರಂದು ಬೆಳಗ್ಗೆ 10 ರಿಂದ 11ರ ವರೆಗೆ ನಗರದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 11.15 ರಿಂದ ಮಧ್ಯಾಹ್ನ 12.30 ರವರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಜೆ 4 ಗಂಟೆಗೆ ಸಾರ್ವಜನಿಕ ಸಂಸ್ಥೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.

ಫೆ.5 ರಂದು ಬೆಳಗ್ಗೆ 9.45 ಕ್ಕೆ ಜಿಲ್ಲೆಯ ಪಿ.ಡಿ.ಜಿ ಕೋರ್ಟ್ ಸಭಾಂಗಣದಲ್ಲಿ ವಕೀಲರ ಸಂಘದ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಎಂಬ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 12 ರಿಂದ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ವಿಚಾರಣೆ/ ತನಿಖೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಿದ್ದಾರೆ.

ಅಂದು ರಾತ್ರಿ 9. ಗಂಟೆಗೆ ಉಡುಪಿಯಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.


Spread the love