ಉಡುಪಿ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ಪ್ರತಿಮೆ ಅನಾವರಣ

Spread the love

ಉಡುಪಿ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ಪ್ರತಿಮೆ ಅನಾವರಣ

ಉಡುಪಿ: ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯತಿಥಿಯ ಪ್ರಯುಕ್ತ ಬ್ರಹ್ಮಗಿರಿ ನಾಯರ್ ಕೆರೆಯಲ್ಲಿ ಇರುವ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಅವರ ಪಂಚಲೋಹ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆಸ್ಕರ್ ಫೆರ್ನಾಂಡಿಸ್ ರಾಷ್ಟ್ರ ಮಟ್ಟದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು, ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ. ಆಸ್ಕರ್ ಪುಣ್ಯ ತಿಥಿಯ ಸಂದರ್ಭದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಐವಾನ್ ಡಿಸೋಜಾ, ಆಸ್ಕರ್ ಫೆರ್ನಾಂಡಿಸ್ ಅವರ ಸಹೋದರಿ ಜುಡಿತ್ ಶ್ರೇಷ್ಠ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ‍್ಯಾತ್ ಶೆಟ್ಟಿ, ನಾಯಕರಾದ ಭುಜಂಗ ಶೆಟ್ಟಿ, ದಿನೇಶ್ ಪುತ್ರನ್, ನರಸಿಂಹ ಮೂರ್ತಿ, ಹರೀಶ್ ಕಿಣಿ, ರಮೇಶ‍್ ಕಾಂಚನ್, ಗೀತ ವಾಗ್ಳೆ, ರೋಶನಿ ಒಲಿವೇರ್, ಯತೀಶ್ ಕರ್ಕೆರಾ ಹಾಗೂ ಇತರರು ಉಪಸ್ಥೀತರಿದ್ದರು.


Spread the love

Leave a Reply

Please enter your comment!
Please enter your name here