ಉಡುಪಿ: ಕಾರಂತೋತ್ಸವ ಕಾರ್ಯಕ್ರಮಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ 

Spread the love

ಉಡುಪಿ: ಕಾರಂತೋತ್ಸವ ಕಾರ್ಯಕ್ರಮಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ 

ಉಡುಪಿ: ಅಕ್ಟೋಬರ್ 10ರಂದು ಮಧ್ಯಾಹ್ನ 3.30 ಕ್ಕೆ ಕೋಟಾ ದಲ್ಲಿ ನಡೆಯುವ ಕಾರಂತೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಕಾನೂನು, ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಭಾಗವಹಿಸಲಿದ್ದಾರೆ.

ಕಾರಂತ ಹುಟ್ಟೂರ ಪ್ರಶಸ್ತಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ನಡೆದಿದ್ದು ಕಾರ್ಯಕ್ರಮ ದಲ್ಲಿ , ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ. ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಭಾಗವಹಿಸಲಿದ್ದಾರೆ.

ಈ ಬಾರಿಯ ಕಾರಂತ ಹುಟ್ಟೂರು ಪ್ರಶಸ್ತಿಯನ್ನು ನಟ ರಮೇಶ ಅರವಿಂದ್ ಅವರಿಗೆ ಪ್ರಧಾನ ಮಾಡಲಾಗುತ್ತಿದೆ.

ಕೋಟಾ ದ ರಾಷ್ಟ್ರೀಯ ಹೆದ್ದಾರಿ ಸಮೀಪದ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಸುಮಾರು 5000 ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು,ಇದಕ್ಕಾಗಿ ಬೃಹತ್ ಪೆಂಡಾಲ್ ವ್ಯವಸ್ಥೆ ಮಾಡಲಾಗಿದ್ದು, ಆಳ್ವಾಸ್ ನಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಘಟಕರಾದ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಸಮಿತಿ ತಿಳಿಸಿದೆ.


Spread the love