ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ; ತಪ್ಪಿತಸ್ಥರ ವಿರುದ್ದ ಕಾನೂನಿನಡಿ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ; ತಪ್ಪಿತಸ್ಥರ ವಿರುದ್ದ ಕಾನೂನಿನಡಿ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕಾರ್ ತಿಳಿಸಿದ್ದಾರೆ.

ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.


Spread the love