ಉಡುಪಿ: ಗಾಂಜಾ ಪ್ರಕರಣದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ

Spread the love

ಉಡುಪಿ: ಗಾಂಜಾ ಪ್ರಕರಣದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ

ಉಡುಪಿ: ಗಾಂಜಾ ಪ್ರಕರಣದಲ್ಲಿ ಬಂಧಿತನಾದ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಅರ್ಫನ್ (27) ಎಂಬಾತನ ವಿರುದ್ದ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ 2020 ಸಪ್ಟೆಂಬರ್ 5 ರಂದು ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಗಾಂಜಾ ಪ್ರಕರಣ ದಾಖಲಾಗಿತ್ತು.

ಆರೋಪಿ ಅರ್ಫನ್ ನಿಂದ ಅಂದಿನ ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ   ರಾಮಚಂದ್ರ ನಾಯಕ್ ರವರು ಪಿರ್ಯಾದಿದಾರರಾಗಿದ್ದು, ಪಿಎಸ್‌ಐ ಲಕ್ಷ್ಮಣ ರವರು ಈ ಪ್ರಕರಣದಲ್ಲಿ ದೋಷಾರೋಪಣಾ ಪತ್ರವನ್ನು ತಯಾರಿಸಿರುತ್ತಾರೆ.

ಅರ್ಫನ್ ರವರಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 30,000/- ದಂಡ ವಿಧಿಸಿದ್ದು, ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ, ಉಡುಪಿಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಧೀಶರಾದ ಶಾಂತವೀರ ಶಿವಪ್ಪರವರು ತೀರ್ಪು ನೀಡಿರುತ್ತಾರೆ. ಪ್ರಾಸಿಕ್ಯೂಶನ್ ಪರವಾಗಿ ಶಾಂತಿಬಾಯಿ ರವರು ವಾದ ಮಂಡನೆಯನ್ನು ಮಾಡಿರುತ್ತಾರೆ.

ಗಾಂಜಾ ಪ್ರಕರಣದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಗ್ಗೆ ಪೊಲೀಸ್ ಅಧೀಕ್ಷಕರು ಇಲಾಖೆಯ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.


Spread the love