ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ಕಾಂಗ್ರೆಸ್ ವಿರೋಧ – ಟಯರ್ ಸುಟ್ಟು ಪ್ರತಿಭಟನೆ

921
Spread the love

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ಕಾಂಗ್ರೆಸ್ ವಿರೋಧ – ಟಯರ್ ಸುಟ್ಟು ಪ್ರತಿಭಟನೆ

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನ ಜೆಡಿಎಸ್ ಪಕ್ಷಕ್ಕೆ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಎದುರು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಪಕ್ಷದ ಹೈಕಮಾಂಡ್ ನಿರ್ಧಾರ ವಿರುದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಅವರ ನೇತೃತ್ವದಲ್ಲಿ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಟಯರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ವರಿಷ್ಠರು ಮನಸ್ಸು ಬದಲಾಯಿಸಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಸ್ಥಾನ ನೀಡಬೇಕಾಗಿ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕರಾದ ಪ್ರಖ್ಯಾತ್ ಶೆಟ್ಟಿ, ವಿಶ್ವಾಸ್ ಅಮೀನ್, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.


Spread the love