ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಭೇಟಿ

Spread the love

ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಭೇಟಿ

ಉಡುಪಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.

ನಂತರ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಆಕ್ಸಿಜನ್ ಪ್ಲಾö್ಯಂಟ್, ಮತ್ತು ಪಿ.ಎಂ. ಕೇರ್ ಅಡಿಯಲ್ಲಿ ನಿರ್ಮಾಣಕ್ಕೆ ಸಿದ್ದವಿರುವ ಆಕ್ಸಿಜನ್ ಕೇಂದ್ರದ ಪರಿಶೀಲನೆ ಹಾಗೂ ನೂತನ ಜಿಲ್ಲಾಸ್ಪತ್ರೆ ನಿರ್ಮಾಣದ ಸ್ಥಳದ ಪರಿಶೀಲನೆ ನಡೆಸಿದರು.

ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಡಾ. ಪ್ರೇಮಾನಂದ್ ಮತ್ತಿತರರು ಉಪಸ್ಥಿತರಿದ್ದರು.


Spread the love