
Spread the love
ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸೈಯ್ಯದ್ ಫುರ್ಖಾನ್ ನೇಮಕ
ಕುಂದಾಪುರ: ಉಡುಪಿ ಜಿಲ್ಲಾ ಎನ್ ಎಸ್ ಯು ಐ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಸೈಯ್ಯದ್ ಫುರ್ಖಾನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಎನ್ ಎಸ್ ಯು ಐ ಅಧ್ಯಕ್ಷ ಕೀರ್ತಿ ಗಣೇಶ್ ನೇಮಕಾತಿ ಆದೇಶ ಹೊರಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಉಸ್ತುವಾರಿ ವಹಿಸಲಾಗಿದೆ.
ಪ್ರಸ್ತುತ ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಸೈಯ್ಯದ್ ಫುರ್ಖಾನ್ ಬೈಂದೂರು ವಿಧಾನಸಭಾ ವ್ಯಾಪ್ತಿಯ ಹೆಮ್ಮಾಡಿಯವರಾಗಿದ್ದು, ಪಕ್ಷ ಹಾಗೂ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.
Spread the love