ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Spread the love

ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಕಾಂಗ್ರೆಸ್ ಪಕ್ಷದ ಹೆಚ್ಚಿನ ನಾಯಕರು ಎನ್.ಎಸ್.ಯು.ಐ.ಯಿಂದ ತೊಡಗಿಸಿಕೊಂಡು ರಾಷ್ಟಮಟ್ಟದ ನಾಯಕರಾಗಿದ್ದಾರೆ. ಹಾಗಾಗಿ ಎನ್.ಎಸ್.ಯು.ಐ.ಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಸಾಮಾಜಿಕ ಹಾಗೂ ರಾಜಕೀಯವಾಗಿ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬಹುದು. ವಿದ್ಯಾರ್ಥಿಗಳು ಜಾತಿ ಮತಗಳನ್ನು ಮೀರಿ ಒಂದಾಗಿ ದೇಶ ಕಟ್ಟುವ ಅವಶ್ಯಕತೆ ಇದೆ ಎಂದು ಮಾಜಿ ಸಚಿವರಾದ  ವಿನಯ ಕುಮಾರ್ ಸೊರಕೆಯವರು ಹೇಳಿದರು.

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಿದ ಎನ್.ಎಸ್.ಯು.ಐ. ಪದಾಧಿಕಾರಿಗಳ ಪದಗ್ರಹಣದಲ್ಲಿ ಮಾತನಾಡುತ್ತಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಎನ್.ಎಸ್.ಯು.ಐ. ಗೆ ನೂತನವಾಗಿ ಆಯ್ಕೆಗೊಂಡ ಎನ್.ಎಸ್.ಯು.ಐ. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ವಿದ್ಯಾರ್ಥಿಗಳೇ ದೇಶದ ಆಶಾಕಿರಣ, ವಿದ್ಯಾರ್ಥಿಗಳು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಎನ್.ಎಸ್.ಯು.ಐ ಪೂರಕ ವಾತಾವರಣ ಕಲ್ಪಿಸಿಕೊಡುವುದು. ಇದರಿಂದ ಆತನ ವ್ಯಕ್ತಿತ್ವ ಬೆಳವಣಿಗೆ ಹೊಂದುವುದು ಎಂದರು.

ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷರಾದ ಸೌರಭ್ ಬಲ್ಲಾಳ್ರವರು ಮಾತನಾಡುತ್ತಾ ಮುಂದಿನ ದಿನಗಳಲ್ಲಿ ಎನ್.ಎಸ್.ಯು.ಐ. ಬಲಿಷ್ಟವಾಗಿ ರೂಪುಗೊಳ್ಳುವಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಪ್ರಥಮ ಹಂತದಲ್ಲಿ ಜಿಲ್ಲಾಧ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸುವಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದರು.

ಸಮಾರಂಭದಲ್ಲಿ ಪಕ್ಷದ ಮುಖಂಡರಾದ ದಿನೇಶ್ ಪುತ್ರನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ಉದ್ಯಾವರ ನಾಗೇಶ್ ಕುಮಾರ್, ಪ್ರಶಾಂತ್ ಜತ್ತನ್ನ, ರಮೇಶ್ ಕಾಂಚನ್, ಸಂಕಪ್ಪ ಎ., ಕೃಷ್ಣಮೂರ್ತಿ ಆಚಾರ್ಯ ಹಾಗೂ ಎನ್.ಎಸ್.ಯು.ಐ.ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿ, ಎನ್.ಎಸ್.ಯು.ಐ.ನ ಕಾರ್ತಿಕ್ ಧನ್ಯವಾದವಿತ್ತರು.


Spread the love