ಉಡುಪಿ ಜಿಲ್ಲಾ ಐಟಿ ಸೆಲ್ ಉಪಾಧ್ಯಕ್ಷರಾಗಿ ನೀರಜ್ ಪಾಟೀಲ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಐಟಿ ಸೆಲ್ ವಿಭಾಗದ ನೂತನ ಉಪಾಧ್ಯಕ್ಷರಾಗಿ ಉಡುಪಿ ಬ್ಲಾಕ್ ಐಟಿ ಸೆಲ್ಲಿನ ಅಧ್ಯಕ್ಷರಾಗಿದ್ದ ನೀರಜ್ ಪಾಟೀಲ್ ಅವರನ್ನು ನೇಮಿಸಿಲಾಗಿದೆ.

ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಅವರು ನೇಮಕದ ಆದೇಶವನ್ನು ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ಸಂಘಟನೆಗೊಳಿಸುವುದರೊಂದಿಗೆ ಪಕ್ಷದ ಹಾಗೂ ಸರಕಾರದ ಕಾರ್ಯಕ್ರಮಗಳ ಕುರಿತು ಪ್ರಚಾರ ಮಾಡುವಂತೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆದೇಶ ಪತ್ರವನ್ನು ನೀರಜ್ ಪಾಟೀಲ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಶ್ವಾಸ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಕಿಣಿ, ಹಾಗೂ ಇತರರು ಉಪಸ್ಥಿತರಿದ್ದರು.