ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ   ಶರ್ಫುದ್ದೀನ್ ಶೇಖ್ ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ   ಶರ್ಫುದ್ದೀನ್ ಶೇಖ್ ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನೂತನ ಅಧ್ಯಕ್ಷರಾಗಿ ಕಾಪುವಿನ ಶರ್ಫುದ್ದೀನ್ ಶೇಖ್ ಅವರನ್ನು ನೇಮಕಗೊಳಿಸಲಾಗಿದೆ.

ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗ್ರಹಿ ಅವರು ರಾಜ್ಯದ ವಿವಿಧ ಜಿಲ್ಲೆಗಳ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಮಾಡಿದ್ದು ಉಡುಪಿ ಜಿಲ್ಲೆಗೆ ಶರ್ಫುದ್ದೀನ್ ಶೇಖ್ ಅವರನ್ನು ನೇಮಿಸಲಾಗಿದೆ.

ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಆತ್ರಾಡಿ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಸಂಯೋಜಕರಾದ ಝೀನಲ್ ಗಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love