Home Mangalorean News Kannada News ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

ಉಡುಪಿ: ರಾಜ್ಯ ಕಾಂಗ್ರೆಸ್ ಘಟಕ ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಿದ್ದಗೊಳ್ಳುತ್ತಿದ್ದು ವಿವಿಧ ವಿಭಾಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಮಾಜಿ ಸಂಸದೆ ರಮ್ಯಾ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸರಕಾರದ ಸಾಧನೆಗಳನ್ನು ಪ್ರಚಾರ ಪಡಿಸುವ ಕೆಲಸ ನಡೆಯುತ್ತಿದ್ದು ರಾಜ್ಯದಲ್ಲೂ ಐಟಿ ಸೆಲ್ ಬಲಗೊಳಿಸುವ ಕೆಲಸ ನಡೆಯುತ್ತಿದೆ.

ಅದರಂತೆ ಉಡುಪಿ ಜಿಲ್ಲಾ ಐಟಿ ಸೆಲ್ ವಿಭಾಗದ ನೂತನ ಅಧ್ಯಕ್ಷರಾರಿ ಕುಂದಾಪುರದ ಕಾಂಗ್ರೆಸಿನ ಯುವ ಕಾರ್ಯಕರ್ತರಾಗಿರುವ ವಿಶ್ವಾಸ್ ಶೆಟ್ಟಿ ಅವರನ್ನು ನೇಮಿಸಿಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನಂತೆ ಜಿಲ್ಲಾಧ್ಯಕ್ಷರಾದ ಗೋಪಾಲ್ ಪೂಜಾರಿ ಅವರು ನೇಮಕದ ಆದೇಶವನ್ನು ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ಸಂಘಟನೆಗೊಳಿಸುವುದರೊಂದಿಗೆ ಪಕ್ಷದ ಹಾಗೂ ಸರಕಾರದ ಕಾರ್ಯಕ್ರಮಗಳ ಕುರಿತು ಪ್ರಚಾರ ಮಾಡುವಂತೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಕುಂದಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆದೇಶ ಪತ್ರವನ್ನು ವಿಶ್ವಾಸ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಕಿಣಿ, ಉಡುಪಿ ಬ್ಲಾಕ್ ಐಟಿ ಸೆಲ್ ಅಧ್ಯಕ್ಷ ನೀರಜ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version