ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಿಂದ ದಿನೇಶ್ ಗುಂಡೂರಾವ್ ಭೇಟಿ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಿಂದ ದಿನೇಶ್ ಗುಂಡೂರಾವ್ ಭೇಟಿ

ಉಡುಪಿ: ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರ ಪದಗ್ರಹಣ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದ ನಿಯೋಗ ಕುಂದಾಫುರ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಜಿಲ್ಲೆಯಲ್ಲಿ ಕೈಗೊಳ್ಳಲಿರುವ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಜಿ ಎ ಬಾವಾ, ಕಾಂಗ್ರೆಸ್ ನಾಯಕರಾದ ಮುರಳಿ ಶೆಟ್ಟಿ, ಹಬೀಬ್ ಆಲಿ ಇತರರು ಉಪಸ್ಥಿತರಿದ್ದರು


Spread the love