
ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಅಂತರಾಷ್ಟ್ರೀಯ ಕ್ರೀಡಾಪಟು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಚಲನಚಿತ್ರ ನಟರೂ ಆಗಿರುವ ರೋಹಿತ್ ಕುಮಾರ್ ಕಟೀಲು ಉದ್ಘಾಟಿಸಿ ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ವಂದಿಸಿದರು. ಮನಮೋಹನ್ ಕಾರ್ಯಕ್ರಮ ನಿರೂಪಿಸಿದರು
ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿರುವ ಕ್ರೀಡಾಕೂಟ ಜನವರಿ 7 ರ ತನಕ ನಡೆಯಲಿದ್ದು, ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಚೇರಿ, ಡಿವೈಎಸ್ಪಿ ಕಚೇರಿ, ಜಿಲ್ಲಾ ಸಶಸ್ತ್ರ ದಳ ಮತ್ತು ಇತರೆ ಘಟಕಗಳ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಗಳು ಭಾಗವಹಿಸಲಿದ್ದಾರೆ.
ದಿನದ 24 ಗಂಟೆಯೂ ಹಗಲಿರುಳೆನ್ನದೆ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರ ಮತ್ತು ಅವರ ಕುಟುಂಬದ ಒತ್ತಡ ನಿವಾರಣೆ, ಮಾನಸಿಕ ಸ್ಥೈರ್ಯ ಹಾಗೂ ಜೀವನೋಲ್ಲಸಾವನ್ನು ಹೆಚ್ಚಿಸುವ ಪ್ರಯತ್ನವಾಗಿ ಪ್ರತಿವರ್ಷವೂ ಪೊಲೀಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭದ ಜನವರಿ 7 ರಂದು ಸಂಜೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪಶ್ಚಿಮ ವಲಯ ಪೊಲೀಸ್ ಮಹಾನೀರಿಕ್ಷರಾದ ದೇವಜ್ಯೋತಿ ರೇ, ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ, ಉಡುಪಿ ವಿಭಾಗದ ಜಿ ಎಸ್ ಟಿ ಸಹಾಯಕ ಆಯುಕ್ತರಾದ ಡಾ|| ನಿಮಿಷಾಂಬ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ವೈ. ನವೀನ್ ಭಟ್ ಭಾಗವಹಿಸಲಿದ್ದಾರೆ