ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರಾದ ಸುನೀಲ್‌, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅದ್ದೂರಿ ಸನ್ಮಾನ

Spread the love

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರಾದ ಸುನೀಲ್‌, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅದ್ದೂರಿ ಸನ್ಮಾನ

ಉಡುಪಿ: ರಾಜ್ಯದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ. ಸುನೀಲ್‌ ಕುಮಾರ್‌ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿತ್ತು.

ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಸುನೀಲ್‌ ಕುಮಾರ್‌, ಮುಖ್ಯಮಂತ್ರಿ ನೀಡುವ ಯಾವುದೇ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸಲಾಗುವುದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಂದಾಗಿ ಒಟ್ಟಾಗಿ ನಮ್ಮಲ್ಲಿರುವ ಎಲ್ಲ ಅಧಿಕಾರ ಮತ್ತು ಹೊಣೆಗಾರಿಕೆಯನ್ನು ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಬೇಕಾಗಿದೆ. ಉಡುಪಿ ಜಿಲ್ಲೆಯ ಐದು ಮಂದಿ ಶಾಸಕರು, ಎಂಎಲ್‌ಸಿ ಹಾಗೂ ಸಂಸದರ ಮಧ್ಯೆ ಯಾವುದೇ ಹೊಂದಾಣಿಕೆ ಕೊರತೆ ಇಲ್ಲ. ನಾವೆಲ್ಲರು ನಮ್ಮ ಜವಾಬ್ದಾರಿಯನ್ನು ಉಡುಪಿ ಜಿಲ್ಲೆಯ ಅಭಿವೃದ್ಧಿಯ ಅಭಿಯಾನಕ್ಕೆ ಬಳಸ ಬೇಕಾಗಿದೆ. ಈ ಮೂಲಕ ಹಿಂದಿನ ಜಿಲ್ಲೆಯ ಅಭಿವೃದ್ಧಿ ಅಭಿಯಾನವನ್ನು ಮುಂದುವರೆಸಲಾಗುವುದು ಎಂದು ಅವರು ತಿಳಿಸಿದರು.

ಅಭಿನಂದನೆ ಸ್ವೀಕರಿಸಿದ ಇನ್ನೋರ್ವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೇಶದ ಸಮಸ್ಯೆಗಳಾದ ಕಾಶ್ಮೀರ, ಆಯೋಧ್ಯೆ, ಅವಳಿ ತಲಾಕ್‌ ಇತ್ಯಾದಿಗಳನ್ನು ಮೋದಿ ಆಡಳಿತ ಬಂದ ಬಳಿಕ ಪರಿಹರಿಸಿದು ಜನತೆಯಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಠಾಚಾರ ಮುಕ್ತ ಆಡಳಿತವನ್ನು ನೀಡಲು ನಾವೆಲ್ಲಾ ಬದ್ಧವಾಗಿದ್ದೇವೆ. ತನಗೆ ಈ ಹಿಂದೆ ಯಡಿಯೂರಪ್ಪ ಸರಕಾರದಲ್ಲಿ ಮಂತ್ರಿ ಸ್ಥಾನ ಸಿಕ್ಕಿದಾಗ ಉಡುಪಿ ಜಿಲ್ಲಾ ಉಸ್ತುವಾರಿಗೆ ಬದಲಾಗಿ ಕಾರಣಾಂತರಗಳಿಂದ ದಕ ಜಿಲ್ಲೆಯ ಉಸ್ತುವಾರಿ ಲಭಿಸಿದ್ದು, ತನಗೆ ವಹಿಸಿದ ಖಾತೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ ಅಭಿನಂದಿಸಿ ಮಾತನಾಡಿದರು.

ಜಿಪಂ ಮಾಜಿ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮುಖಂಡರಾದ ಬಿ.ಎನ್.ಶಂಕರ ಪೂಜಾರಿ, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರ್ ನವೀನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು.


Spread the love