ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆ ಉದ್ಘಾಟನೆ

Spread the love

ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆ ಉದ್ಘಾಟನೆ

ಉಡುಪಿ: ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇದರ ನೇತೃತ್ವದಲ್ಲಿ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ವಾಯ್ಸ್ ಆಪ್ ಚಾಣಕ್ಯ 2022 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಡುಪಿ ಸೃಷ್ಟಿ ಸಂಗೀತ ತರಬೇತಿ ಕೇಂದ್ರದಲ್ಲಿ ರವಿವಾರ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಸೃಷ್ಟಿ ಸಂಗೀತ ತರಬೇತಿ ಕೇಂದ್ರದ ಆಡಳಿತ ನಿಧೆ೯ಶಕ ಪ್ರಕಾಶ್ ಸುವರ್ಣ ಕಟಪಾಡಿ ವಹಿಸಿದ್ದರು.

ಸಮಾರಂಭದಲ್ಲಿ ಚಿತ್ರಕಲಾ ಶಿಕ್ಷಕ ರಮೇಶ್ ಕಿದಿಯೂರು,ತೀಪು೯ಗಾರರಾದ ಸಂಗೀತ ಶಿಕ್ಷಕಿ ಸ್ವಾತಿ ಭಟ್ ಉಡುಪಿ, ಜಯಶ್ರೀ ಕೋಟ್ಯಾನ್ ಕಟಪಾಡಿ, ಸೃಷ್ಟಿ ಫೌಂಡೇಶನ್ ನ ಅಧ್ಯಕ್ಷೆ ಪ್ರೀತಿ ಪಿ.ಸುವರ್ಣ,ಎಸ್ ಪಿ ಮ್ಯೂಸಿಕ್ ನ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.

ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಸ್ವಾಗತಿಸಿ,ಪ್ರಸಾದ್ ಹೆಬ್ರಿ ಕಾಯ೯ಕ್ರಮ ನಿರೂಪಿಸಿ, ಚಾಣಕ್ಯ ಸಂಸ್ಥೆಯ ಉಪನ್ಯಾಸಕಿ ಶತಾ ಶೆಟ್ಟಿ ವಂದಿಸಿದರು.

ಉಡುಪಿ ಜಿಲ್ಲೆಯ ಸುಮಾರು 40 ಮಿಕ್ಕಿ ಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಆಯ್ಕೆಯಾದವರು ಸೆಮಿ ಫೈನಲ್ ಹಾಗೂ ಸೆಮಿಫೈನಲ್ ಆಯ್ಕೆಯಾದವರಿಗೆ ಫೈನಲ್ ನಲ್ಲಿ ಹಾಡಲು ಅವಕಾಶ ಕಲ್ಪಿಸಲಾಗಿದೆ.ವಿಜೇತರಿಗೆ ಪ್ರಥಮ ಬಹುಮಾನವಾಗಿ ರೂ7777/- ಟ್ರೋಫಿ ಮತ್ತು ಪ್ರಮಾಣಪತ್ರ ದ್ವಿತೀಯ ಬಹುಮಾನವಾಗಿ ರೂ4444/_ ಟ್ರೋಫಿ ಮತ್ತು ಪ್ರಮಾಣಪತ್ರ ಹಾಗೂ ತೃತೀಯ ಬಹುಮಾನವಾಗಿ ರೂ 2222/-ಟ್ರೋಫಿ ಮತ್ತು ಪ್ರಮಾಣಪತ್ರ ಹಾಗೂ 3ಜನ ಉತ್ತಮ ಗಾಯಕರಿಗೆ ಸಮಾಧಾನಕರ ಬಹುಮಾನವಾಗಿ ತಲಾ₹ 1111/- ಮತ್ತು ಪ್ರಮಾಣಪತ್ರ ಹಾಗೂ 3 ಜನ ಗಾಯಕರಿಗೆ ತೀರ್ಪುಗಾರರ ಪ್ರಮಾಣ ಪತ್ರ ದೊಂದಿಗೆ ಗಿಫ್ಟ್ ಹ್ಯಾಂಪರ್ ದೊರೆಯಲಿದೆ ಎಂದು ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯಕುಮಾರ್ ತಿಳಿಸಿದರು.


Spread the love