
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶಿಕ್ಷಕರ ದಿನಾಚರಣೆ
ಉಡುಪಿ: ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ರಾಜಕೀಯಕ್ಕೆ ಧುಮುಕಿ, ಕಾಂಗ್ರೆಸ್ ಪಕ್ಷದಲ್ಲಿ ಅನುಪಮ ಸೇವೆ ಸಲ್ಲಿಸಿದ ಮೂವರು ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿಯರಾದ ಫರೀದಾ ಹೆಜಮಾಡಿ, ಪದ್ಮಾವತಿ ಎಂ ಮತ್ತು ಐರಿನ್ ಮಿನೇಜಸ್ ಅವರನ್ನು ಗೌರವಿಸಲಾಯಿತು.ಕಾಂಗ್ರೆಸ್ ನಾಯಕ ನಾಗೇಶ್ ಕುಮಾರ್ ಉದ್ಯಾವರ ಅವರು ಶಿಕ್ಷಕ ದಿನಾಚರಣೆಯ ಕುರಿತು ಮಾತನಾಡಿದರು.
ಮೀನಾಕ್ಷಿ ಮಾಧವ ಬನ್ನಂಜೆ, ಪ್ರಭಾ ಶೆಟ್ಟಿ ಮತ್ತು ಶಾಂತಿ ಪಿರೇರಾ ಅವರು ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಪದ್ಮಾವತಿ ಮತ್ತು ಶ್ರೀಮತಿ ಫರೀದಾ ಅವರು ತಮ್ಮ ವೃತ್ತಿ ಜೀವನದ ನೆನಪುಗಳನ್ನು ಸಭೆಯ ಮುಂದೆ ಬಿಚ್ಚಿಟ್ಟರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನೂ ಸ್ವಾಗತಿಸಿದರು.
ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ,ಡಾ.ಸುನೀತಾ ಶೆಟ್ಟಿ, ಜ್ಯೋತಿ ಮೆನನ್,ಆಶಾ ಆಂಚನ್,ಸುಚರಿತಾ, ರಮಾದೇವಿ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ರೈ, ಬ್ಲಾಕ್ ಅಧ್ಯಕ್ಷರಾದ ಶ್ರೀಮತಿ ಮಮತಾ ಶೆಟ್ಟಿ,ಗೋಪಿ ನಾಯ್ಕ್,ಪ್ರಭಾ ಶೆಟ್ಟಿ,ರಂಜನಿ ಹೆಬ್ಬಾರ್,ಸುರೆಯ್ಯಾ ಅಂಜುಮ್, ಹರಿಣಿ ಕೋಟ್ಯಾನ್, ಜಯಶ್ರೀ, ತಬಸ್ಸುಮ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಮ್ಮದ್, ಪ್ರಸಾದ್ , ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಲೀಂ ಇನ್ನಾ,ಮುಂತಾದವರು ಉಪಸ್ಥಿತರಿದ್ದರು.
ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿ, ಶಾಂತಿ ಪಿರೇರಾ ಧನ್ಯವಾದವಿತ್ತರು.