ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ನೇಮಕ

Spread the love

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ನೇಮಕ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಇದರ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರನ್ನು ಆಯ್ಕೆ ಮಾಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪಕ್ಷದಲ್ಲಿ ವಿವಿಧ ಹುದ್ದೆಗಳಾದ ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೂಡ ಜ್ಯೋತಿ ಹೆಬ್ಬಾರ್ ಸೇವೆ ಸಲ್ಲಿಸಿದ್ದು, ಪ್ರಸ್ತುತ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.


Spread the love