ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸಿನಿಂದ ಕುಡುಬಿ ಕುಟುಂಬದ ಜೊತೆ ಗ್ರಾಮ ವಾಸ್ತವ್ಯ

Spread the love

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸಿನಿಂದ ಕುಡುಬಿ ಕುಟುಂಬದ ಜೊತೆ ಗ್ರಾಮ ವಾಸ್ತವ್ಯ

ಉಡುಪಿ: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯಿಂದ  ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ.

ಇದರ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸಿನ ವತಿಯಿಂದ ಕೊಕ್ಕರ್ಣೆ ಒಳಬೈಲು ಬಳಿ ಕುಡುಬಿ ಕುಟುಂಬಗಳ ಮನೆಯಲ್ಲಿ  ನೂರು ಹಣತೆಗಳನ್ನು ಮಹಿಳೆಯರಿಂದ ಪ್ರಜ್ವಲಿಸಿ ನೂರು ದೀಪ ನಮನ ಎನ್ನುವ ವಿಶೇಷ  ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಅಮೃತ್ ಶೆಣೈ ನೆರವೇರಿಸಿ ಶುಭ ಹಾರೈಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸಿನ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ ಮಾತನಾಡಿ, ಸರ್ಕಾರದ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವುದು, ಮಹಿಳೆಯರು ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಲಾಗಿದೆ, ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ಕಲ್ಕೆರೆಗೊಲ್ಲರ ಹಟ್ಟಿಯಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಲಿಸಲಿದ್ದಾರೆ, ಇದರಂತೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಮಹಿಳಾ ಘಟಕಗಳು ವಾಸ್ತವ್ಯ ಹೂಡಿ ಗ್ರಾಮಸ್ಥರ ನೋವು, ಬೇಡಿಕೆಗಳಿಗೆ ಸ್ಪಂದಿಸುವುದು ಈ ವಾಸ್ತವ್ಯದ ಎಂದು  ತಿಳಿಸಿದರು.

ಈ ಸಂಧರ್ಭದಲ್ಲಿ  ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಉಸ್ತುವಾರಿ ಶೈಲಾ ಕುಟ್ಟಪ್ಪ, ಉಡುಪಿ ಜಿಲ್ಲಾ ಕಾಂಗ್ರೇಸ್ ನಿಯೋಜಿತ ಅಧ್ಯಕ್ಷೆ ಗೀತಾ ವಾಗ್ಲೆ, ತಾಲೂಕು ಪಂಚಾಯತ್ ಸದಸ್ಯೆ ಡಾ.ಸುನೀತಾ ಡಿ.ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಬ್ರಹ್ಮಾವರ ಮಹಿಳಾ ಬ್ಲಾಕ್ ಅಧ್ಯಕ್ಷೆ ಗೋಪಿ ಕೆ.ನಾಯ್ಕ, ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯ ಸುಧಾಕರ ಶೆಟ್ಟಿ ಮೈರ್ಮಾಡಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ರೋಶನಿ ಒಲಿವರ್, ವಾಣಿ ಆರ್.ಶೆಟ್ಟಿ, ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಮಮತಾ ಶೆಟ್ಟಿ, ಜ್ಯೋತಿ ಪುತ್ರನ್, ರೇವತಿ ಶೆಟ್ಟಿ,ಸುಜಾತ ಆಚಾರ್ಯ, ಬ್ರಹ್ಮಾವರ ಯುತ್‍ಬ್ಲಾಕ್ ಕಾಂಗ್ರೇಸ್ ನಾಯಕ ರಾಘವೇಂದ್ರ ಶೆಟ್ಟಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದೇವಕಿ ಎಸ್.ಕೋಟ್ಯಾನ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ವಸಂತ ನಾಯ್ಕ ಒಳಬೈಲು, ಸಂತೋಷ್ ಕುಮಾರ್ ಸೂರಾಲು, ವಿಜಯಲಕ್ಷ್ಮೀ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟೇಶ್ ಸುವರ್ಣ, ಅಂಬಿಕಾ, ಕೃಷ್ಣ ಹೆಬ್ಬಾರ್, ಸದಾಶಿವ ನಾಯ್ಕ, ನಾರಾಯಣ ಮರಕಾಲ ಮತ್ತು ಒಳಬೈಲು ಕುಡುಬಿ ಕೂಡು ಕುಟುಂಬದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುಡುಬಿ ಕುಟುಂಬದ ಗುರಿಕಾರ ಸಾಂತ ನಾಯ್ಕ, ಹಿರಿಯ ಮಹಿಳೆ ಸುಬ್ಬಿ ಬಾಯಿ ಇವರನ್ನು ಸನ್ಮಾನಿಸಲಾಯಿತು. ರಾತ್ರಿ ವಿವಿಧ ಕಾರ್ಯಕ್ರಮಗಳು, ಸಹಭೋಜನ ಮತ್ತು ಗ್ರಾಮ ವಾಸ್ತವ್ಯ ಮಾಡಿದರು.


Spread the love