ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಪುನರಾಯ್ಕೆ ಬಯಸಿದ ವಿಶ್ವಾಸ್ ಅಮೀನ್

Spread the love

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಪುನರಾಯ್ಕೆ ಬಯಸಿದ ವಿಶ್ವಾಸ್ ಅಮೀನ್

ಉಡುಪಿ: ಜನವರಿ 12 ರಂದು ನಡೆಯಲಿರುವ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಿಂದಿನ ಸಾಲಿನ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ನಾಮಪತ್ರ ಸಲ್ಲಿಸಿದ್ದಾರೆ.

ಡಿಸೆಂಬರ್ 31 ಕ್ಕೆ ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಉಡುಪಿ ಜಿಲ್ಲೆಯಿಂದಲೂ ಹಲವಾರು ಮಂದಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ವಿಶ್ವಾಸ್ ಅಮೀನ್ ತಮ್ಮ ಹಿಂದಿನ ಅವಧಿಯಲ್ಲಿ ಹಲವಾರು ಹೋರಾಟಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಜಿಲ್ಲೆಯಲ್ಲಿ ಬಿಜೆಪಿ ‌ಶಾಸಕರ  ಮರಳು ಹಗರಣ, ಸಿಮೆಂಟ್ ಹಗರಣದಂತ ಹಲವಾರು ಹೋರಾಟಗಳಲ್ಲಿ ಮಂಚೂಣಿ ಸ್ಥಾನದಲ್ಲಿದ್ದರು. ಜಿಲ್ಲೆಯಾದ್ಯಂತ ಸಂಚರಿಸಿ ಯುವಜನರನ್ನು ಸಂಘಟಿಸಿ ಪಕ್ಷ ಸಂಘಟನೆಯನ್ನ ಮಾಡಿದ್ದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಮತದಾನ ಪ್ರಕ್ರಿಯೆ ಆನ್ ಲೈನ್ ಮೂಲಕ ನಡೆಯಲಿದ್ದು, ಆಂಡ್ರಾಯ್ಡ್ ಮೊಬೈಲ್ ಮೂಲಕ ಮತದಾನ ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ಸಮಯವಾಗಿರುತ್ತದೆ.


Spread the love