ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ: ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚನೆ

Spread the love

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ: ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಿರುವ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಕೇಸು ದಾಖಲಿಸಲು ರಾಜ್ಯ ಸರ್ಕಾರದ ಕೈಗಾರಿಕೆ, , ವಾರ್ತಾ ಇಲಾಖೆಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಟ್ಟಾ ಜಮೀನು ಸೇರಿದಂತೆ ಲಾಕ್ಡೌನ್ ಅವಧಿಯಲ್ಲಿ ಅಕ್ರಮ ಮರಳುಗಾರಿಕೆ ನಡೆದಿರುವ ಬಗ್ಗೆ ಉಪವಿಭಾಗಾಧಿಕಾರಿಗಳು, ಪ್ರತೀ ಜಮೀನಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಲು ಅವರು ನಿರ್ದೇಶಿಸಿದರು.

ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು , ಈಗಾಗಲೇ ಇಂತಹ ಪ್ರಕರಣಗಳ ವಿರುದ್ಧ ಕೇಸು ದಾಖಲಿಸಲಾಗಿದೆ. 5 ವಾಹನಗಳನ್ನು ಜಫ್ತಿ ಮಾಡಲಾಗಿದೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ವಿವಿಧ ಇಲಾಖಾಧಿಖಾರಿಗಳು ಉಪಸ್ಥಿತರಿದ್ದರು.


Spread the love