ಉಡುಪಿ ಜಿಲ್ಲೆಯಲ್ಲಿ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ – ಜಿಲ್ಲಾಧಿಕಾರಿ ಜಿ ಜಗದೀಶ್

Spread the love

ಉಡುಪಿ ಜಿಲ್ಲೆಯಲ್ಲಿ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ – ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ : ಉಡುಪಿ ಜಿಲ್ಲೆಯ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಭಾನುವಾರ ಸ್ಪಷ್ಟನೆ ನೀಡಿದ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರು ಶಂಕಿತ ರೋಗಿಗಳ ಕಫ ಹಾಗೂ ರಕ್ತವನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು. ಅದರ ವರದಿ ಜಿಲ್ಲಾಡಳಿತದ ಕೈಸೇರಿದ್ದು ಶಂಕಿತರ ವೈದ್ಯಕೀಯ ವರದಿ ನೆಗೆಟಿವ್ ಎಂದು ಬಂದಿದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ


Spread the love