ಉಡುಪಿ ಜಿಲ್ಲೆಯಲ್ಲಿ ಕೊರೋನಾ ಗೆ ನಾಲ್ಕನೇ ಬಲಿ – ಬೈಂದೂರಿನ 70 ವರ್ಷದ ವೃದ್ಧ ಸಾವು

Spread the love

ಉಡುಪಿ ಜಿಲ್ಲೆಯಲ್ಲಿ ಕೊರೋನಾ ಗೆ ನಾಲ್ಕನೇ ಬಲಿ – ಬೈಂದೂರಿನ 70 ವರ್ಷದ ವೃದ್ಧ ಸಾವು

ಉಡುಪಿ: ಮಹಾಮಾರಿ ಕೊರೋನಾಗೆ ಉಡುಪಿ ಜಿಲ್ಲೆಯಲ್ಲಿ ನಾಲ್ಕನೇ ಬಲಿಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಕೋರೋನಾ ಸೋಂಕಿನಿಂದ ಮೃತರಾದವರ ಸಂಖ್ಯೆ 4ಕ್ಕೆ ಏರಿಕೆ ಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು 15 ದಿನಗಳ ಹಿಂದೆ ಕೊರೋನ ಪಾಸಿಟಿವ್ ಬಂದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love