ಉಡುಪಿ: ಜಿಲ್ಲೆಯಲ್ಲಿ ಗೆಲುವಿನ ನಗು ಬೀರಿದ ಬಿಜೆಪಿ

Spread the love

ಉಡುಪಿ: ಜಿಲ್ಲೆಯಲ್ಲಿ ಗೆಲುವಿನ ನಗು ಬೀರಿದ ಬಿಜೆಪಿ

ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಗೆಲುವಿನ ನಗು ಬೀರಿದೆ.

ಈಗಾಗಲೇ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ವಿ. ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ ಪಾಲ್ ಸುವರ್ಣ ಗೆಲುವು ಸಾಧಿಸಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಕಿರಣ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗುರುರಾಜ್ ಗಂಟಿಹೊಳೆ ಗೆಲುವಿನ ಸನಿಹದಲ್ಲಿ ಇದ್ದಾರೆ.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೂ ಕರಾವಳಿ ಜಿಲ್ಲೆಗಳಲ್ಲಿ ಮಕಾಡೆ ಮಲಗಿರುವುದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಚ್ಚರಿಗೆ ಎಡೆ ಮಾಡಿಕೊಟ್ಟಿದೆ.


Spread the love

Leave a Reply

Please enter your comment!
Please enter your name here