ಉಡುಪಿ ಜಿಲ್ಲೆಯಲ್ಲಿ ಜುಲೈ 13 ರಂದು ಲಸಿಕಾ ಲಭ್ಯತೆ ಮಾಹಿತಿ

Spread the love

ಉಡುಪಿ ಜಿಲ್ಲೆಯಲ್ಲಿ ಜುಲೈ 13 ರಂದು ಲಸಿಕಾ ಲಭ್ಯತೆ ಮಾಹಿತಿ

ಉಡುಪಿ: ಜಿಲ್ಲೆಯಲ್ಲಿ ಜುಲೈ 13 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಉಡುಪಿ ನಗರ ಪ್ರದೇಶದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) ಇಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love