ಉಡುಪಿ ಜಿಲ್ಲೆಯಲ್ಲಿ ಪ್ರತೀ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Spread the love

ಉಡುಪಿ ಜಿಲ್ಲೆಯಲ್ಲಿ ಪ್ರತೀ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

ಉಡುಪಿ: ಮುಂಬರುವ 2019ರ ಲೋಕಸಭಾ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಚುನಾವಣೆಗಾಗಿ ಪಕ್ಷವನ್ನು ಸಜ್ಜುಗೊಳಿಸಲು ಜುಲೈ ತಿಂಗಳ ಪ್ರತೀ ಆದಿತ್ಯವಾರ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ 2 ಬ್ಲಾಕ್‍ಗಳಲ್ಲಿ ಪಕ್ಷದ ಎಲ್ಲಾ ಮುಖಂಡರ ಉಪಸ್ಥಿತಿಯೊಂದಿಗೆ ಕಾರ್ಯಕರ್ತರ ಸಭೆಗಳನ್ನು ಕರೆಯಲಾಗಿದೆ. ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಉದ್ದೇಶಿಸಲಾಗಿದೆ. ಈ ಎಲ್ಲಾ ಸಭೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜನಾರ್ದನ ತೋನ್ಸೆ, ಪಕ್ಷದ ನಾಯಕರುಗಳಾದ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರುಗಳಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಹಾಗೂ ರಾಜ್ಯ ಇಂಟಕ್‍ನ ಅಧ್ಯಕ್ಷರಾದ ರಾಕೇಶ್ ಮಲ್ಲಿ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ  ದಿನೇಶ್ ಪುತ್ರನ್ ಮತ್ತು ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ವಿಚಾರ ವಿನಿಮಯ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love