ಉಡುಪಿ ಜಿಲ್ಲೆಯಲ್ಲಿ ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.

ಸೋಮವಾರ ಸಂಜೆ ಬಿಡುಗಡೆಯಾಗಿರುವ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿಯಲ್ಲಿ 2 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಕೊರೋನ ಪೀಡಿತರ ಸಂಖ್ಯೆ 1028 ಕ್ಕೆ ಏರಿಕೆ ಆಗಿದೆ.

ಸೋಮವಾರ ಪತ್ತೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದಿಂದ ಬಂದ ಒಬ್ಬ ಪುರುಷನಲ್ಲಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಮಹಿಳೆಗೆ ಸೋಂಕು ದೃಢಗೊಂಡಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ

ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


Spread the love