ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹಾವಳಿ; ಸೋಮವಾರ ಪೊಲೀಸ್, ಆಸ್ಪತ್ರೆ ಸಿಬ್ಬಂದಿ ಸೇರಿ 14 ಮಂದಿಗೆ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹಾವಳಿ; ಸೋಮವಾರ ಪೊಲೀಸ್, ಆಸ್ಪತ್ರೆ ಸಿಬ್ಬಂದಿ ಸೇರಿ 14 ಮಂದಿಗೆ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಸೋಮವಾರ ಒಟ್ಟು 14 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1077ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ108 ಸೋಂಕಿತರಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ಸೋಂಕಿತರಲ್ಲಿ ಪೊಲೀಸ್, ಆಸ್ಪತ್ರೆ ಸಿಬ್ಬಂದಿ ಕೂಡ ಸೇರಿದ್ದಾರೆ.

ಇಂದು 67 ಸ್ಯಾಂಪಲ್ ಗಳ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈಸೇರಿದ್ದು, ಅದರಲ್ಲಿ 53 ಸ್ಯಾಂಪಲ್ ಗಳು ನೆಗೆಟಿವ್ ಬಂದಿದ್ದು, 14 ಜನರ ಸ್ಯಾಂಪಲ್ ಪಾಸಿಟಿವ್ ಆಗಿದೆ.

ಇಂದಿನ ಸೋಂಕಿತರಲ್ಲಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಬ್ಬರ ಸೋಂಕು ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದು, ಸೋಂಕಿತ ಸಂಖ್ಯೆ 6843ರ ಸಂಪರ್ಕದಿಂದ ನಾಲ್ವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love