ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ

Spread the love

ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ

ಉಡುಪಿ:  ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮುನ್ಸೂಚನೆ ನೀಡಿದೆ.

ಮೇ 16ರಂದು ಅಪರಾಹ್ನ 1 ಗಂಟೆಯ ಹವಾಮಾನ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಮೇ 17 ಮತ್ತು 19 ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮೇ 18 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.
ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ನದಿ/ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.


Spread the love