ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ – 204 ಮಂದಿಯಲ್ಲಿ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ – 204 ಮಂದಿಯಲ್ಲಿ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಮತ್ತೆ 204 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 768 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಹಾರಾಷ್ಟ್ರದಿಂದ ಆಗಮಿಸುರುವ ಜನರಲ್ಲಿ ಸೋಂಕು ದೃಢಪಟ್ಟಿದೆ.

203 ಮಹಾರಾಷ್ಟ್ರದಿಂದ ಬಂದವರು, ಒಬ್ಬರು ಪೊಲೀಸರು ಸೇರಿದ್ದು, ಸೋಂಕಿತರಲ್ಲಿ 157 ಜನ ಪುರುಷರು 40 ಮಹಿಳೆಯರು ಮತ್ತು 7 ಮಕ್ಕಳು ಸೇರಿದ್ದಾರೆ. ಇಂದಿನ ವರದಿಗಾಗಿ 2000ಕ್ಕಿಂತ ಹೆಚ್ಚು ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ 204 ಪಾಸಿಟಿವ್ ಪತ್ತೆಯಾಗಿದೆ. ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹೊರ ರಾಜ್ಯಗಳಿಂದ ಬಂದಿರುವ ಎಂಟೂವರೆ ಸಾವಿರ ಜನರ ಬಹುತೇಕ ಪರೀಕ್ಷೆ ಮುಗಿದಿದೆ. ಶುಕ್ರವಾರ ಸಂಜೆಯೊಳಗೆ ಎಲ್ಲಾ ಟೆಸ್ಟ್ ಮುಗಿಯುತ್ತದೆ. ಆ ಬಳಿಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಲಿದೆ. ನಂತರ ನಾವು ತೀವ್ರ ಉಸಿರಾಟದ ತೊಂದರೆ ಮತ್ತು ಕರೋನಾ ಲಕ್ಷಣ ಕಂಡು ಬಂದವರ ಪರೀಕ್ಷೆ ನಡೆಸಲಿದ್ದೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.


Spread the love