ಉಡುಪಿ ಜಿಲ್ಲೆಯಲ್ಲಿ ರವಿವಾರ 1061 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ರವಿವಾರ 1061 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ರವಿವಾರ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ. ಇಂದು ಒಟ್ಟು 1061 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 503. ಜಿಲ್ಲೆಯಲ್ಲಿ ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 6546 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 1061 ಮಂದಿಯಲ್ಲಿ 546 ಮಂದಿ ಪುರುಷರು ಹಾಗೂ 515 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 757 ಮಂದಿ ಉಡುಪಿ ತಾಲೂಕಿಗೆ ಸೇರಿದವರು. ಕುಂದಾಪುರ ತಾಲೂಕಿನ 207 ಹಾಗೂ ಕಾರ್ಕಳ ತಾಲೂಕಿನ 92 ಮಂದಿಯೊಂದಿಗೆ ಹೊರಜಿಲ್ಲೆಗಳ ಐವರು ಸಹ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ.

ಇಂದು ಪಾಸಿಟಿವ್ ಬಂದ 1061 ಮಂದಿಯಲ್ಲಿ 45 ಮಂದಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೂ, 10 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 20 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 986 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಜಿಲ್ಲೆಯಲ್ಲಿ ಒಟ್ಟು 160 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು ಇವರಲ್ಲಿ 11 ಮಂದಿ ವೆಂಟಿಲೇಟರ್, 21 ಮಂದಿ ಐಸಿಯು ಹಾಗೂ 34ಮಂದಿ ಎಚ್‌ಡಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.


Spread the love