ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ

Spread the love

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಾಸಿಟಿವ್ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ್ದಾರೆ. ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

https://www.facebook.com/MangaloreanNews/videos/183404530545886


Spread the love