Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿ : ಉಡುಪಿ ಜಿಲ್ಲೆಯಲ್ಲಿಶನಿವಾರ ಒಟ್ಟು 19 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಮೂವರು ಅನ್ಯ ಜಿಲ್ಲೆ ಪ್ರಯಾಣ ಹಾಗೂ 14 ಮಂದಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಗೊಂಡಿದೆ. ಇದಲ್ಲದೆ ಒರ್ವ ಸೋಂಕಿತ ವ್ಯಕ್ತಿ ಸಂಪರ್ಕ ಪತ್ತೆ ಕಾರ್ಯ ನಡೆಯುತ್ತಿದೆ.

ಜಿಲ್ಲೆಯಲ್ಲಿ ರಾಂಡಮ್ ಚೆಕ್ಕಿಂಗ್ ನಡೆಸಿದ ಸಮಯದಲ್ಲಿ ಒರ್ವ ಆಟೋ ಡ್ರೈವರ್ ಗೆ ಕೂಡ ಸೋಂಕು ಇರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಶನಿವಾರ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ 10 ಮಂದಿ ಡಿಸ್ವಾರ್ಜ್ ಹೊಂದಿದ್ದಾರೆ. ಈ ವರೆಗೆ ಒಟ್ಟು 1114 ರೋಗಿಗಳು ಬಿಡುಗಡೆ ಹೊಂದಿದ್ದು ಸದ್ಯ 160 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love

Exit mobile version