ಉಡುಪಿ ಜಿಲ್ಲೆಯಲ್ಲಿ ಶನಿವಾರ (ಜ15) 607 ಮಂದಿಗೆ ಕೋರೊನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಶನಿವಾರ (ಜ15) 607 ಮಂದಿಗೆ ಕೋರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು , ಶನಿವಾರ 607 ಮಂದಿ ಪಾಸಿಟಿವ್‌ ಧೃಡಪಟ್ಟಿದೆ. ದಿನದಲ್ಲಿ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ 2879 ಕ್ಕೇರಿದೆ. ಇಂದು ದಿನದಲ್ಲಿ 63 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 607 ಮಂದಿಯಲ್ಲಿ 318 ಮಂದಿ ಪುರುಷ ರಾದರೆ 299 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 398 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 117 ಮಂದಿ ಹಾಗೂ ಕಾರ್ಕಳ ತಾಲೂಕಿನ 90 ಹಾಗೂ ಇತರ ಜಿಲ್ಲೆಯ 2 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಈ ಮೂರು ತಾಲೂಕುಗಳ ಪಾಸಿಟಿವಿಟಿ ಪ್ರಮಾಣ ಸದ್ಯ 12.82%, 7.87% ಹಾಗೂ 6.22% ಆಗಿದೆ. ಜಿಲ್ಲೆಯ ಪ್ರಮಾಣ 10.02% ರಲ್ಲಿದೆ.

ಇಂದು ಪಾಸಿಟಿವ್ ಬಂದ 607 ಮಂದಿಯಲ್ಲಿ 28 ಮಂದಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೂ, 7 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 8 ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 564 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.


Spread the love

Leave a Reply