ಉಡುಪಿ ಜಿಲ್ಲೆಯ ಎರಡನೇ ಕೋವಿಡ್ -19 ಸೋಂಕಿತ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಉಡುಪಿ ಜಿಲ್ಲೆಯ ಎರಡನೇ ಕೋವಿಡ್ -19 ಸೋಂಕಿತ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಕೊರೋನಾ ವೈರಸ್ ಸೋಂಕಿತರಲ್ಲಿ ಎರಡನೇ ರೋಗಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಮಾ. 17ರಂದು ದುಬೈನಿಂದ ಆಗಮಿಸಿದ ಉಡುಪಿ ಮೂಲದ 35 ವರ್ಷದ ವ್ಯಕ್ತಿ ಕೊರೊನಾ ಲಕ್ಷಣ ಕಂಡ ಹಿನ್ನೆಲೆಯಲ್ಲಿ ಮಾ.27ರಂದು ಕಾರ್ಕಳದ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಆತನ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

ಈತನಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಈತನ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್ ಚಂದ್ರ ಸೂಡ ಹೇಳಿದ್ದಾರೆ.

ಈ ಮೊದಲು ಮಾ.18ರಂದು ದುಬೈನಿಂದ ಬಂದಿದ್ದ 34 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಎರಡು ದಿನಗಳ ಹಿಂದೆಯಷ್ಠೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.


Spread the love