
ಉಡುಪಿ ಜಿಲ್ಲೆಯ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿಪಡಿಸಲು ದಿನಾಂಕ ಪ್ರಕಟ
ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಲು ತಾಲೂಕುವಾರು ದಿನಾಂಕಗಳನ್ನು ಜಿಲ್ಲಾಡಳಿತ ಪ್ರಕಟಿಸಿದ್ದು ಅದರ ವಿವರ ಈ ಕೆಳಗಿನಂತಿದೆ.
ಉಡುಪಿ ತಾಲೂಕಿನ 16 ಗ್ರಾಮ ಪಂಚಾಯತ್ ಗಳಿಗೆ ಜನವರಿ 16ರಂದು ಮಣಿಪಾಲದ ರಜತಾದ್ರಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಬ್ರಹ್ಮಾವರ ತಾಲೂಕಿನ 27 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೇಗಳ ಮೀಸಲಾತಿ ಪ್ರಕ್ರಿಯೆಯನ್ನು ಜನವರಿ 18ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಕುಂದಾಪುರ ತಾಲೂಕಿನ 45 ಗ್ರಾಮ ಪಂಚಾಯತ್ ಗಳಿಗೆ ಜನವರಿ 19ರಂದು ಕೋಟೇಶ್ವರದ ಯುವ ಮೆರಿಡಿಯನ್ ನಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ
ಕಾಪು ತಾಲೂಕಿನ 16 ಗ್ರಾಮಪಂಚಾಯತ್ ಗಳಅಧ್ಯಕ್ಷ ಉಪಾಧ್ಯಕ್ಷ ಹುದ್ದೇಗಳ ಮೀಸಲಾತಿ ಪ್ರಕ್ರಿಯೆ ಜನವರಿ 21 ರಂದು ಬೆಳಿಗ್ಗೆ 11.30 ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದ್ದು, ಬೈಂದೂರು ತಾಲೂಕಿನ 15 ಗ್ರಾಮಪಂಚಾಯತ್ ಗಳಿಗೆ ಜನವರಿ 21 ರಂದು ಮಧ್ಯಾಹ್ನ 3.30ಕ್ಕೆ ಜೆ ಎನ್ ಆರ್ ಕಲಾ ಮಂದಿರ ಯಡ್ತರೆಯಲ್ಲಿ ನಡೆಯಲಿದೆ.
ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೇಗಳ ಮೀಸಲಾತಿ ಪ್ರಕ್ರಿಯೆಯನ್ನು ಜನವರಿ 22 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮಂಜುನಾಥ ಪೈ ಹಾಲ್ ಮತ್ತು ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯತ್ ಗಳ ಮೀಸಲಾತಿ ಪ್ರಕ್ರಿಯೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಅನಂತ ಪದ್ಮನಾಭ ಸನ್ನಿಧಿ ಸಭಾಂಗಣ ಹೆಬ್ರಿಯಲ್ಲಿ ನಡೆಯಲಿದೆ.
ಅಧ್ಯಕ್ಷ ಉಪಾಧ್ಯಕ್ಷ ಹುದ್ದೇಗಳ ಮೀಸಲಾತಿ ಪ್ರಕ್ರಿಯೆ ನಿಗದಿಪಡಿಸುವ ದಿನಾಂಕಗಳಂದು ಸಂಬಂಧಿತ ಗ್ರಾಮ ಪಂಚಾಯತ್ ಗಳ ಸದಸ್ಯರು ಹಾಜರಾಗುವಂತೆ ಕೋರಲಾಗಿದೆ